ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ - Mahanayaka

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

C P Yogeshwar (1)
23/10/2024


Provided by

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ದಿನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕೆಂದು ಅವರು ರಾಜೀನಾಮೆ ಪತ್ರದಲ್ಲಿ ಕೋರಿದ್ದಾರೆ.

ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕೆ ವಂದನೆಗಳು ಎಂದು ಯೋಗೇಶ್ವರ್ ವಿಜಯೇಂದ್ರಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಈ ಪತ್ರವನ್ನು ವಾಟ್ಸಪ್ ಮೂಲಕ ಕಳುಹಿಸಿಕೊಟ್ಟಿದ್ದಾರೆ.

ಮೂರು ದಿನಗಳ ಹಿಂದೆ ಯೋಗೇಶ್ವರ್ ವಿಧಾನಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೊನೆ ಕ್ಷಣದವರೆಗೂ ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಎಲ್ಲಾ ಪ್ರಯತ್ನಗಳನ್ನು ನಡೆಸಿದರೂ ಅದು ಕೈಗೂಡಲಿಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವ ಆಫರ್‌ನ್ನು ಅವರು ನಯವಾಗಿಯೇ ತಿರಸ್ಕರಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ