ಮೊನ್ನೆಯವರೆಗೂ ಹಿಂದುತ್ವವಾದಿಯಾಗಿದ್ದ ಸಿ.ಪಿ.ಯೋಗೇಶ್ವರ್, ಈಗ ಜಾತ್ಯಾತೀತ | ಕಾಂಗ್ರೆಸ್ ಪಕ್ಷದ ದುಸ್ಥಿತಿಯೇ ಇದು? - Mahanayaka

ಮೊನ್ನೆಯವರೆಗೂ ಹಿಂದುತ್ವವಾದಿಯಾಗಿದ್ದ ಸಿ.ಪಿ.ಯೋಗೇಶ್ವರ್, ಈಗ ಜಾತ್ಯಾತೀತ | ಕಾಂಗ್ರೆಸ್ ಪಕ್ಷದ ದುಸ್ಥಿತಿಯೇ ಇದು?

c p yogeshwar
24/10/2024

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಗೆ ಹಾರಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪಕ್ಷ ಸಿದ್ಧಾಂತಗಳೆಲ್ಲವೂ ಕೇವಲ ಕಾರ್ಯಕರ್ತರಿಗೆ ಮಾತ್ರ. ನಾಯಕರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಯಾವುದೇ ಪಕ್ಷಕ್ಕೂ ಹಾರಬಹುದು, ಮೊನ್ನೆಯವರೆಗೆ ಹಿಂದೂತ್ವವಾದಿಯಾಗಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಜಾತ್ಯಾತೀತವಾದಿಯಾಗಿ ಕೆಲವೇ ಸೆಕೆಂಡುಗಳಲ್ಲಿ ಬದಲಾಗಿದ್ದಾರೆ. ಆದರೆ ಕಾರ್ಯಕರ್ತರು ಮಾತ್ರ ಬಡಿದಾಡಬೇಕು ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚನ್ನಪಟ್ಟಣದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹೋರಾಡಿದ್ದೆಲ್ಲವೂ ವ್ಯರ್ಥವಾಯ್ತು. ಇಲ್ಲಿಯವರೆಗೂ ಪಕ್ಷ ಸಿದ್ಧಾಂತಕ್ಕೆ ಬೆಲೆ ಕೊಟ್ಟು, ಬಿಜೆಪಿ ವಿರುದ್ಧ ಹೋರಾಡಿದ ಕಾಂಗ್ರೆಸ್ ಕಾರ್ಯಕರ್ತರು, ಇಂದು ತಾವು ಯಾರ ವಿರುದ್ಧ ಮಾತನಾಡುತ್ತಿದ್ದರೋ ಅದೇ ವಿಪಕ್ಷದ ನಾಯಕನನ್ನು ತಮ್ಮ ನಾಯಕ ಎಂದು ಹೇಳಬೇಕಾದ ದುಸ್ಥಿತಿ ಎದುರಾಗಿದೆ. ತಮ್ಮ ಅಭ್ಯರ್ಥಿ ಎಂದು ಮತಹಾಕಿಸಿ ಗೆಲ್ಲಿಸಬೇಕಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಆರ್ ಎಸ್ ಎಸ್ ನ್ನು ಪ್ರಖರವಾಗಿ ವಿರೋಧಿಸುತ್ತೇವೆ ಎನ್ನುವ ಕಾಂಗ್ರೆಸ್ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಮ್ಮ ಬೇಳೆ ಬೇಯಿಸಿಕೊಂಡರು. ಸ್ಥಳೀಯ ಕಾರ್ಯಕರ್ತರ ಭಾವನೆಗಳಿಗೂ ಬೆಲೆ ಕೊಡದೇ ಬಿಜೆಪಿಯವರು ಬೇಡ ಎಂದು ತಿರಸ್ಕರಿಸಿದ್ದ ಅಭ್ಯರ್ಥಿಯನ್ನು ಆತುರಾತುರವಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದೇ ಅಲ್ಲದೇ ಪಕ್ಷಕ್ಕೆ ಸೇರ್ಪಡೆಗೊಂಡ ದಿನವೇ ಟಿಕೆಟ್ ನೀಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು ಅಂತ ಸ್ವತಃ ಕಾಂಗ್ರೆಸ್ ಪಕ್ಷದಲ್ಲೇ ಬೇಸರದ ಮಾತುಗಳು ಕೇಳಿ ಬರುತ್ತಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ