ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ, ಭ್ರಷ್ಟಾಚಾರದ ವಿರುದ್ಧ ಸಿಪಿಐಎಂ ಮುಖಂಡ ಶೇಖರ ಲಾಯಿಲ ಉಪವಾಸ ಸತ್ಯಾಗ್ರಹ - Mahanayaka

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ, ಭ್ರಷ್ಟಾಚಾರದ ವಿರುದ್ಧ ಸಿಪಿಐಎಂ ಮುಖಂಡ ಶೇಖರ ಲಾಯಿಲ ಉಪವಾಸ ಸತ್ಯಾಗ್ರಹ

shekhar laila
15/03/2023

ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಮಾ. 20ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು  ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ತಿಳಿಸಿದ್ದಾರೆ.

ಇಡೀ ವ್ಯವಸ್ಥೆ ಭ್ರಷ್ಟಾಚಾರದ ಪರವಾಗಿ ಕೆಲಸ ಮಾಡುತ್ತಿದೆ ತಾಲೂಕಿನಲ್ಲಿ ಕೇವಲ ಐದು ಕಡೆಗಳಲ್ಲಿ ಮಾತ್ರ ಮರಳುಗಾರಿಕೆಗೆ ಅವಕಾಶವಿದೆ ಆದರೆ ತಾಲೂಕಿನ ಎಲ್ಲ ನದಿ ತೊರೆಗಳಲ್ಲಿಯೂ ಅಕ್ರಮ ಮರಳುಗಾರಿಕೆ ಯಾವುದೇ ನಿಯಂತ್ರಣವಿಲ್ಲದೆ ನಡೆಯುತ್ತಿದೆ ಎಂದಿರುವ ಅವರು ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅದೇ ರೀತಿ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುತ್ತಿಗೆ ನೀಡುವಿಕೆಯಲ್ಲಿ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ, ನಗರದ ಪ್ರವಾಸಿ ಮಂದಿರದ ಗುತ್ತಿಗೆಯಲ್ಲಿಯೂ ಇದೇ ರೀತಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಇತರ ಗುತ್ತಿಗೆ ನೀಡುವಿಕೆಯಲ್ಲಿಯೂ ಇದೇ ರೀತಿಯ ಭ್ರಷ್ಟಾಚಾರ ನಡೆದಿದ್ದು ಇದೆಲ್ಲದರ ಬಗ್ಗೆ ಹೈಕೋರ್ಟಿನ. ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಮಾ.20ರಿಂದ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸಲಿರುವುದಾಗಿ ಅವರು ತಿಳಿಸಿದ್ದಾರೆ. ತಾಲೂಕಿನ ಕಾಮಗಾರಿಗಳ ಬಗ್ಗೆ ತನಿಖೆಗೆ ಸರಕಾರ ಮುಂದಾಗುವ ವರೆಗೆ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ