ದೇವಾಲಯದ ಉತ್ಸವದಲ್ಲಿ ಪಾಲ್ಗೊಂಡಿದ್ದ ಕೇರಳದ ಸಿಪಿಎಂ ಮುಖಂಡನ ಕೊಲೆ: ಶುಕ್ರವಾರ ಬಂದ್ ಗೆ ಕರೆ

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ದೇವಾಲಯದ ಉತ್ಸವದ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಸ್ಥಳೀಯ ನಾಯಕನನ್ನು ಹತ್ಯೆ ಮಾಡಲಾಗಿದೆ. ಮೃತರನ್ನು ಪಿ.ವಿ.ಸತ್ಯನಾಥನ್ ಎಂದು ಗುರುತಿಸಲಾಗಿದೆ.
ಕೊಯಿಲಾಂಡಿಯ ಚೆರಿಯಪುರಂ ದೇವಸ್ಥಾನದಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಇವರ ಮೇಲೆ ಇದ್ದಕ್ಕಿದ್ದಂತೆ ಕೊಡಲಿಯಿಂದ ಹಲ್ಲೆ ಮಾಡಲಾಯಿತು. ಪರಿಣಾಮ ಬೆನ್ನು ಮತ್ತು ಕುತ್ತಿಗೆಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.
ಸ್ಥಳದಿಂದ ಪರಾರಿಯಾಗಿರುವ ಹಂತಕರನ್ನು ಇನ್ನೂ ಗುರುತಿಸಲಾಗಿಲ್ಲ. ವೈಯಕ್ತಿಕ ದ್ವೇಷವೇ ಸತ್ಯನಾಥನ್ ಮೇಲಿನ ದಾಳಿಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಪಿ.ವಿ. ಸತ್ಯನಾಥನ್ ಅವರು ಸಿಪಿಐ (ಎಂ) ಕೊಯಿಲಾಂಡಿ ಕೇಂದ್ರ ಸ್ಥಳೀಯ ಸಮಿತಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಸಿಪಿಐ (ಎಂ) ಶುಕ್ರವಾರ ಕೊಯಿಲಾಂಡಿಯಲ್ಲಿ ಬಂದ್ ಗೆ ಕರೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth