ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ವಿಚ್ಛೇದನ: ಅಧಿಕೃತ ಘೋಷಣೆ ಮಾಡಿದ ಜೋಡಿ

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಕ್ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ತಮ್ಮ ವಿಚ್ಛೇದನದ ವಿಚಾರವನ್ನು ಬಯಲು ಮಾಡಿದ್ದಾರೆ.
ನಮ್ಮ ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ ಎಂದು ನಟಿ ತಿಳಿಸಿದ್ದಾರೆ. 4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ.
ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ ಎಂದಿದ್ದಾರೆ.
ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾಗಿದ್ದರು. ಜುಲೈ 2020ರಲ್ಲಿ ಇವರಿಗೆ ಮೊದಲ ಮಗು ಅಗಸ್ತ್ಯ ಜನಿಸಿದ್ದ. ಇತ್ತೀಚೆಗೆ ಇವರ ವಿಚ್ಛೇದನದ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಇದೀಗ ವಿಚ್ಛೇದನದ ಬಗ್ಗೆ ಈ ಜೋಡಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97