ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೋರ್ವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿ
ನವದೆಹಲಿ: ಕೆಲವು ವಾರಗಳ ಹಿಂದೆ ಜೈಲಿನಿಂದ ಹೊರಬಂದ 35 ವರ್ಷದ ಅತ್ಯಾಚಾರ ಪ್ರಕರಣದ ಅಪರಾಧಿಯೋರ್ವ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೋರ್ವಳು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ರಾಕೇಶ್ ವರ್ಮಾ ಎಂದು ಗುರುತಿಸಲಾಗಿದ್ದು, ಈ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಈತ ಶಿಕ್ಷೆಗೆ ಗುರಿಯಾಗಿದ್ದನು. ಆ ಬಳಿಕ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.
ರಾಕೇಶ್ ಮೊದಲು ಸಂತ್ರಸ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದು, ಬಳಿಕ ಜಗತ್ದೇವ್ ತಲಾಬ್ ಪ್ರದೇಶಕ್ಕೆ ಕೊಂಡೊಯ್ದು ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನು ರೇವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
12 ವರ್ಷಗಳ ಹಿಂದೆ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣದಲ್ಲಿ ಆರೋಪಿ ರಾಕೇಶ್ ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. 7 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ರಾಕೇಶ್ ಉತ್ತಮ ನಡವಳಿಕೆಯ ಆಧಾರದಲ್ಲಿ ಆತನ ಮೂರು ವರ್ಷಗಳ ಶಿಕ್ಷೆಯನ್ನು ಮನ್ನಾ ಮಾಡಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ

























