11:15 PM Saturday 15 - November 2025

ರೈಲಿನಲ್ಲಿ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಪಾಪಿ ಅರೆಸ್ಟ್!

arest
05/04/2023

ಕೇರಳ: ರೈಲು ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ( ಎಟಿಎಸ್ ) ಬಂಧಿಸಿದೆ.

ಕೇರಳದ ಅಲಪ್ಪುಳ–ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ 9:45 ರ ಸುಮಾರಿಗೆ ಕೊಝಿಕ್ಕೋಡ್ ನಗರವನ್ನು ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ಆರೋಪಿ ಪೆಟ್ರೋಲ್ ಸುರಿದು ಸಹ-ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದ. ಇದರಿಂದ ಓರ್ವ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ರೆ, 8 ಪ್ರಯಾಣಿಕರು ಗಾಯಗೊಂಡಿದ್ದರು.

ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಆರೋಪಿ ಶಾರುಖ್ ಸೈಫಿಯನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ. ಶಂಕಿತ ಆರೋಪಿ ಸೈಫಿ ಮಂಗಳವಾರ ರತ್ನಗಿರಿಯಲ್ಲಿ ಇದ್ದದ್ದನ್ನು ಪತ್ತೆ ಹಚ್ಚಲಾಗಿತ್ತು.
ಆತ ರೈಲಿನಿಂದ ಬಿದ್ದು ತಲೆಗೆ ಗಾಯಗೊಂಡು ಚಿಕಿತ್ಸೆಗಾಗಿ ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನುವುದು ತಿಳಿದು ಬಂದಿತ್ತು. ಆದರೆ ಚಿಕಿತ್ಸೆ ಪೂರ್ಣಗೊಳ್ಳುವ ಮೊದಲೇ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಇದಾದ ಬಳಿಕ ರತ್ನಗಿರಿ ಪ್ರದೇಶದಲ್ಲಿ ವ್ಯಾಪಕವಾಗಿ ಶೋಧ ನಡೆಸಿ ಆರೋಪಿ ಶಾರೂಖ್ ಸೈಫಿಯನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version