ಖಾಸಗಿ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ: ಕಬ್ಬನ್ ಪಾರ್ಕ್ ಪೊಲೀಸರಿಂದ ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿಗೆ ನೊಟೀಸ್

03/09/2023
ಬೆಂಗಳೂರು: ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿಗೆ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆ.
ಕುಂಭಂ ಶಿವಕುಮಾರ್ ರೆಡ್ಡಿ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಮಹಿಳೆಯ ದೂರಿನ ಆಧಾರದ ಮೇಲೆ ಶಿವಕುಮಾರ್ ರೆಡ್ಡಿ ಮೇಲೆ ಎಫ್ ಐಆರ್ ದಾಖಲಿಸಿಕೊಂಡ ಕಬ್ಬನ್‌ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಅವರ ವಿರುದ್ಧ ಹೈದರಾಬಾದ್‌ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು
ವಾಟ್ಸಪ್ ಮೂಲಕ ಶಿವಕುಮಾರ್ ರೆಡ್ಡಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಈ ಕುರಿತು ಕುಂಭಂ ಶಿವಕುಮಾರ್ ರೆಡ್ಡಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯಾವಕಾಶವನ್ನು ಕೇಳಿದ್ದಾರೆ.