ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರುದ್ಧ ಸಂಘರ್ಷ ಮಾಡುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಬೆಂಗಳೂರು: ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶವು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಭಾರೀ ಜನಸ್ತೋಮದೊಂದಿಗೆ ನಡೆಯಿತು. ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತ್ತು.
ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಹೋರಾಟಗಾರ್ತಿ ರಮಾಬಾಯಿ ಅಂಬೇಡ್ಕರ್, ಈ ದೇಶದಲ್ಲಿ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರುದ್ಧ ಸಂಘರ್ಷ ಮಾಡುವುದು ನಮ್ಮ ಹಕ್ಕಾಗಿದೆ ಎಂದು ಕರೆ ನೀಡಿದರು.
ಇಂದು ಅಂಬೇಡ್ಕರರ ಪರಿನಿಬ್ಬಾಣ ದಿನವೂ ಆಗಿದ್ದು, ಅವರು ಕೊಟ್ಟ ಮತದಾನದ ಹಕ್ಕನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಶಿಕ್ಷಣಕ್ಕಾಗಿ ಹೋರಾಡುವುದು ಅಂಬೇಡ್ಕರರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ಹೇಳಿದರು.
ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್ ಅವರು ಮಾತನಾಡಿ, ದಲಿತರ ಪಾದ ಸ್ಪರ್ಶದಿಂದ ಬಸವನಗುಡಿ ಇಂದು ಶಾಪ ಮುಕ್ತವಾಗಿದೆ. ಪುರೋಹಿತರು ಕುಟಿಲತೆಯಿಂದ ಈ ದೇಶದಿಂದ ಬುದ್ಧನನ್ನು ಓಡಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮತ್ತೆ ಬುದ್ಧನನ್ನು ಭಾರತಕ್ಕೆ ಕರೆತಂದರು. ಇಂದು ಸಂವಿಧಾನವನ್ನು ಬಳಸಿಕೊಂಡು ಬ್ರಾಹ್ಮಣ ಶಾಹಿಗಳು ಭೂತಚೇಷ್ಟೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಆಶಯ ಭಾಷಣ ಮಾಡಿದ ದಲಿತ ಮುಖಂಡ ಇಂದೂಧರ, ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಬಿಜೆಪಿ, ಆರೆಸ್ಸೆಸ್ ನಿಜವಾದ ದೇಶದ್ರೋಹಿಗಳು. ನ್ಯಾಯ ಕೇಳುವುದೇ ದೇಶದ್ರೋಹವಾದರೆ ನಿಮ್ಮಂತಹ ಅಯೋಗ್ಯರು ಇಲ್ಲಿ ಬದುಕಲು ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka