ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ಸೈಬರ್ ಕಳ್ಳರು! - Mahanayaka

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ಸೈಬರ್ ಕಳ್ಳರು!

dr vidhya kumari
21/11/2023

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಹಣಕ್ಕಾಗಿ ತಹಶೀಲ್ದಾರರುಗಳಿಗೆ ಸಂದೇಶ ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಧಿಕಾರಿ ಹೆಸರನ್ನು ಬಳಸಿಕೊಂಡು ನಕಲಿ ಖಾತೆಯನ್ನು ಸೃಷ್ಠಿಸಿ ಶಿವಮೊಗ್ಗ ಹಾಗೂ ಉಡುಪಿಯ ತಹಶೀಲ್ದಾರ್ ಗಳಿಗೆ ಹಣ ಕಳುಹಿಸುವಂತೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ದೂರಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳು ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿರುವ ಪೊಲೀಸರು ನಕಲಿ ಖಾತೆಯನ್ನು ಪಶ್ಚಿಮ ಬಂಗಾಳದ ವ್ಯಕ್ತಿ ಸೃಷ್ಠಿಸಿರುವುದಾಗಿ ಗುರುತಿಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ