1:46 PM Saturday 25 - October 2025

ಸೈಬರ್ ಕಳ್ಳರ ಉಪಟಳ: ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲೇ ಹಣಕ್ಕೆ ಬೇಡಿಕೆ!

anupam agarwal
27/10/2023

ಮಂಗಳೂರು ಪೊಲೀಸ್ ಆಯುಕ್ತರ ವಾಟ್ಸಪ್ ಪ್ರೊಫೈಲ್ ಫೋಟೋ ಹಾಕಿ ವಾಟ್ಸಪ್ ಮೆಸೇಜ್, ಕರೆ ಮೂಲಕ‌ ತುರ್ತು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಲ್ಲಿ ಬೆಳಕಿಗೆ ಬಂದಿದೆ.

ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಪೊಟೋ ಹಾಕಿ ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ಪೊಲೀಸ್ ಅಧಿಕಾರಿಗಳು ಸೇರಿದಂತೆ ಆಯುಕ್ತರ ಹಲವು ಮಂದಿ ಪರಿಚಿತರಿಗೆ ಮೆಸೇಜ್ ಕಳುಹಿಸಿದ್ದಾನೆ.‌

“ನಾನು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್. ನಾನು ಆಸ್ಪತ್ರೆಗೆ ದಾಖಲಾಗಿದ್ದು ತುರ್ತು ಹಣ ಬೇಕಾಗಿದೆ. ನನ್ನ ಯುಪಿಐ ವರ್ಕ್ ಮಾಡುತ್ತಿಲ್ಲ. ಅರ್ಜೆಂಟಾಗಿ ಹಣ ಟ್ರಾನ್ಸ್ ಫರ್ ಮಾಡಿ. ಒಂದು ತಾಸಿನೊಳಗೆ ವಾಪಸ್ ಮಾಡುತ್ತೇನೆ” ಎಂದು  ತಿಳಿಸಿದ್ದಾನೆ. ಅಲ್ಲದೆ ಕರೆ ಕೂಡ ಮಾಡಿದ್ದಾನೆ. ಈ ಬಗ್ಗೆ ಪರಿಶೀಲನೆ‌ ನಡೆಸಿದಾಗ ಇದು ವಂಚನೆಯ ಯತ್ನ ಎಂಬುದಾಗಿ ಗೊತ್ತಾಗಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದು ಇದೊಂದು ನಕಲಿ ಕರೆ. ಯಾರು ಕೂಡ ಸ್ಪಂದಿಸಬಾರದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version