ಫೆಂಗಲ್ ಚಂಡಮಾರುತ: ಅದ್ಯಪಾಡಿಯಲ್ಲಿ ಭೂಕುಸಿತ
03/12/2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಲ್ಲಿನ ಅದ್ಯಪಾಡಿ ಎಂಬಲ್ಲಿ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದೆ.
ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದೆ. ಇದರ ಪರಿಣಾಮ ಬಜಪೆ—ಅದ್ಯಪಾಡಿ ಸಂಪರ್ಕ ಕಡಿತಗೊಂಡಿದೆ.
ವಿಮಾನ ನಿಲ್ದಾಣ ಭಾಗದಿಂದ ಮಣ್ಣು ನೀರು ಹರಿದು ಬಂದು, ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: