ಮಿಚಾಂಗ್ ಚಂಡಮಾರುತ: ಚೆನ್ನೈನಲ್ಲಿ ಭಾರೀ ಮಳೆಯಿಂದಾಗಿ  ಹಲವು ಪ್ರದೇಶಗಳು ಜಲಾವೃತ

channai
04/12/2023

ಬೆಂಗಳೂರು: ಮಿಚಾಂಗ್ ಚಂಡಮಾರುತದ ಪರಿಣಾಮವಾಗಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿ ಆತಂಕ ಸೃಷ್ಟಿಯಾಗಿದೆ.

ರಸ್ತೆಗಳು ಜಲಾವೃತಗೊಂಡ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.  ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳು ನೀರಿನಲ್ಲಿ ಮುಳುಗಿದ್ದು, ಕೆಲವೊಂದು ದ್ವಿಚಕ್ರ ವಾಹನಗಳು, ಕಾರುಗಳು ಕೊಚ್ಚಿಕೊಂಡು ಹೋಗಿವೆ.

ತೀವ್ರ ಮಳೆಯ ಪರಿಣಾಮ ವಿದ್ಯುತ್ ಹಾಗೂ ಇಂಟರ್ ನೆಟ್ ಸಂಪರ್ಕ ಕಡಿತವಾಗಿದೆ.  ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಾರ್ವಜನಿಕ ರಜೆ ಘೋಷಿಸಿದ್ದಾರೆ.

ಇನ್ನೂ ಚೆನ್ನೈ ವಿಮಾನ ನಿಲ್ದಾಣಕ್ಕೂ ಮಳೆ ನೀರು ನುಗ್ಗಿದ್ದು, ಮುಂಜಾಗೃತಾ ಕ್ರಮವಾಗಿ  ಇಂದು ರಾತ್ರಿ 11 ಗಂಟೆಯ ವರೆಗೂ ವಿಮಾನ ನಿಲ್ದಾಣ ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version