ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ: 8 ಮಂದಿಗೆ ಗಾಯ - Mahanayaka
5:57 PM Sunday 28 - September 2025

ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ: 8 ಮಂದಿಗೆ ಗಾಯ

27/09/2025

ಹೊಸಪೇಟೆ: ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5:15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದಾರೆ.


Provided by

ಗಾಯಾಳುಗಳನ್ನು ತೋರಣಗಲ್‌ ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ:

ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದೆ.

ಬೆಳಿಗ್ಗೆ ಸ್ಟವ್‌ ಹಚ್ಚಲು ಕವಿತಾ ಯತ್ನಿಸಿದಾಗ ಏಕಾ ಏಕಿ ಬೆಂಕಿ ಹತ್ತಿಕೊಂಡಿತು. ಸ್ಫೋಟದಿಂದ ಮನೆ ಶೇ 50ರಷ್ಟು ಧ್ವಂಸವಾಗಿದೆ. ಕವಿತಾ ಅವರಲ್ಲದೆ, ಹಾಲಪ್ಪ, ಮೈಲಾರಪ್ಪ, ಗಂಗಮ್ಮ, ಮಲ್ಲಮ್ಮ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸಪೇಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ