ಫಡ್ನವೀಸ್ ಗೆ ‘ಮಹಾ’ ಸಿಎಂ ಪಟ್ಟ: ಮೋದಿ ಉಪಸ್ಥಿತಿಯಲ್ಲಿ ಪ್ರಮಾಣವಚನ ಫಿಕ್ಸ್
ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರನ್ನು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಬುಧವಾರ ಆಯ್ಕೆ ಮಾಡಲಾಗಿದೆ. ಗುರುವಾರ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮುಂಬೈಯಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಫಡ್ನವೀಸ್ ರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಾಯುತಿ ಒಕ್ಕೂಟದ ನಾಯಕರು ಬುಧವಾರ ಮಧ್ಯಾಹ್ನ 3.30 ಗಂಟೆಗೆ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.
ಮುಂಬೈನ ವಿಧಾನಸಭಾ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಯವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು. ಮಹಾರಾಷ್ಟ್ರ
ಮಂಗಳವಾರ, ಫಡ್ನವೀಸ್ ಶಿವಸೇನೆ ನಾಯಕ ಏಕನಾಥ್ ಶಿಂಧೆ ಯವರನ್ನು ಅವರ ಅಧಿಕೃತ ನಿವಾಸ ‘ವರ್ಷ’ದಲ್ಲಿ ಭೇಟಿಯಾಗಿದ್ದಾರೆ. ಸರ್ಕಾರ ರಚನೆಗಾಗಿ ಕಳೆದ ವಾರ ದೆಹಲಿಯಲ್ಲಿ ನಡೆದ ಚರ್ಚೆಯ ನಂತರ ಅವರಿಬ್ಬರ ನಡುವೆ ನಡೆದ ಮೊದಲ ವೈಯಕ್ತಿಕ ಸಭೆ ಇದಾಗಿದೆ.
ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರ ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು, ಬಿಜೆಪಿಯು ತನ್ನ ಮಿತ್ರ ಪಕ್ಷಗಳನ್ನು ಸಮಾಧಾನಪಡಿಸುವ ಪ್ರಯತ್ನ ಇದೆಂದು ಪ್ರತಿಪಾದಿಸಿದ್ದಾರೆ. ಅದಾಗ್ಯೂ, ಈ ಸಭೆ ಡಿಸೆಂಬರ್ 5 ರಂದು ನಡೆಯುವ ಪ್ರಮಾಣವಚನಕ್ಕೆ ಸಂಬಂಧಿಸಿದ ಪ್ರಾಥಮಿಕ ಚರ್ಚೆಯಾಗಿದೆ ಎಂದು ನಂಬಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj