ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ - Mahanayaka

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ

D.K. District Qazi Alhaj Twaka Ahmed Musliar.jpg
23/06/2026

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ (78 ವರ್ಷ) ಅವರು ಜೂನ್ 23ರ ಮಂಗಳವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

2010ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ್ದ ತ್ವಾಕಾ ಉಸ್ತಾದ್ ಅವರು, ದ.ಕ. ಮತ್ತು ಕೇರಳ ರಾಜ್ಯದ ಸುಮಾರು 200ಕ್ಕೂ ಹೆಚ್ಚು ಜಮಾಅತ್ ಗಳ ಖಾಝಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ಸಮಸ್ತ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಅವರು ಜವಾಬ್ದಾರಿ ನಿಭಾಯಿಸಿದ್ದರು.

ಸಾರ್ವಜನಿಕರು ಮತ್ತು ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಮೃತರ ಪಾರ್ಥಿವ ಶರೀರವನ್ನು ಮಂಗಳೂರಿನ ಕೇಂದ್ರ ಜುಮಾ ಮಸ್ಜಿದ್ ನಲ್ಲಿ ಇರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಖಾಝಿಯವರ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಬಳಿಕ ದಫನ ಕಾರ್ಯದ (ಅಂತ್ಯಸಂಸ್ಕಾರ) ಸ್ಥಳ ಮತ್ತು ಸಮಯವನ್ನು ನಿಗದಿಪಡಿಸಲಾಗುವುದು ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ