ಕಾವೂರು: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ
ಕಾವೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇಲ್ಲಿ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಜರುಗಿತು.
ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಭಾವಚಿತ್ರಕ್ಕೆ ಪುಷ್ಪರ್ಚನೆಗೈದು, ಕಾವೂರು ಶಾಲೆಯಿಂದ ಕಾವೂರು ಪೊಲೀಸ್ ಸ್ಟೇಷನ್ ತನಕ ತಂಬಾಕು ವ್ಯಸನ ಮುಕ್ತ ಸ್ಲೋಗನ್ ಮತ್ತು ರಾಷ್ಟ್ರಧ್ವಜಗಳನ್ನ ಹಿಡಿದು ಬ್ಯಾಂಕ್ ನೊಂದಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಂತರ ವಿದ್ಯಾರ್ಥಿಗಳಿಂದ ಭಾಷಣ, ಭಜನೆ ಕಾರ್ಯಕ್ರಮ ನಡೆಯಿತು. ಕಾವೂರು ಕ್ಲಸ್ಟರ್ CRP ದೀಪಿಕಾ ಶೆಟ್ಟಿ, SDMC ಅಧ್ಯಕ್ಷರಾದ ಲಕ್ಷ್ಮಣ್ ಛಲವಾದಿ, SDMC ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸೀತಮ್ಮ ಜೆ. ಸ್ವಾಗತಿಸಿದರು. ಸುನೀತಾ ಫ್ಲಾವಿಯ ಡಿಕೋಸ್ತಾ ನಿರೂಪಿಸಿದರು. ಕೋಕಿಲವಾಣಿ ವಂದಿಸಿದರು. ಆಶಾ, ವಿಜಯಲಕ್ಷ್ಮೀ, ರೇಷ್ಮಾ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: