ಅಧಿಕಾರ ಹಂಚಿಕೆ ರಹಸ್ಯ ಬಯಲು ಮಾಡಿದ ಡಿ.ಕೆ.ಶಿವಕುಮಾರ್: 4—5 ಜನರ ನಡುವಿನ ರಹಸ್ಯ ಒಪ್ಪಂದ ಏನು?
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”ವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಕ್ಕೆ ಯಾವುದೇ ಮುಜುಗರವನ್ನುಂಟುಮಾಡಲು ಮತ್ತು ಪಕ್ಷವನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ, 2023 ರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದವನ್ನು ಉಲ್ಲೇಖಿಸಿ, ಕಾಂಗ್ರೆಸ್ ಪಕ್ಷದೊಳಗೆ ಸಿಎಂ ಪಟ್ಟಕ್ಕಾಗಿ ಹೋರಾಟ ಆರಂಭಗೊಂಡಿದೆ. ಈ ನಡುವೆ ಹೇಳಿಕೆ ನೀಡಿರುವ ಡಿಕೆಶಿ, ಪಕ್ಷ ಇದ್ದರೆ ನಾವೆಲ್ಲ, ಪಕ್ಷವನ್ನು ನಾನು ವೀಕ್ ಮಾಡುವುದಿಲ್ಲ. ಸಿದ್ದರಾಮಯ್ಯ ಬಜೆಟ್ ಮಂಡಿಸ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೂಡ ದುಡಿದಿದ್ದಾರೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿ ಹೇಳಿದ್ದಾರೆ.
ನಾನು ನನ್ನನ್ನು ಸಿಎಂ ಮಾಡಿ ಅಂತ ಯಾರನ್ನೂ ಕೇಳಿಲ್ಲ. ಇದು ಐದು ಮತ್ತು ಆರು ಜನರ ನಡುವಿನ ರಹಸ್ಯ ಒಪ್ಪಂದ. ನಾನು ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಬಯಸುವುದಿಲ್ಲ. ನಾನು ನನ್ನ ಆತ್ಮಸಾಕ್ಷಿಯನ್ನು ನಂಬುತ್ತೇನೆ. ನಾವು ನಮ್ಮ ಆತ್ಮಸಾಕ್ಷಿಯೊಂದಿಗೆ ಕೆಲಸ ಮಾಡಬೇಕು. ಪಕ್ಷಕ್ಕೆ ಯಾವುದೇ ರೀತಿಯಲ್ಲಿ ಮುಜುಗರ ಉಂಟುಮಾಡಲು ಮತ್ತು ಅದನ್ನು ದುರ್ಬಲಗೊಳಿಸಲು ನಾನು ಬಯಸುವುದಿಲ್ಲ. ಪಕ್ಷ ಇದ್ದರೆ, ನಾವು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























