RSS ಗೀತೆಯನ್ನು ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ: ಬಿ.ಕೆ.ಹರಿಪ್ರಸಾದ್

ನವದೆಹಲಿ : ವಿಧಾನಸಭೆಯ ಕಲಾಪದಲ್ಲಿ RSS ಗೀತೆಯನ್ನು ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಸಂದೇಶ ಕೊಡಲು ಅವರು RSS ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಕೇವಲ ಉಪ ಮುಖ್ಯಮಂತ್ರಿಯಾಗಿ ಅವರು ಸಂಘದ ಪ್ರಾರ್ಥನೆ ಮಾಡೋದರಲ್ಲಿ ಅಭ್ಯಂತರ ಇಲ್ಲ. ಆದರೆ, ಅವರು ಕೆಪಿಸಿಸಿ ಅಧ್ಯಕ್ಷರೂ ಕೂಡ ಹೌದು. ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಮಾಡಿದ್ದು ತಪ್ಪು. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರಿಂದ RSS ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಸಂಘದ ಪ್ರಾರ್ಥನೆಗೆ ಬಿಜೆಪಿಯವರ ಸಮರ್ಥನೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಇಂತಹ ವಿಚಾರಗಳನ್ನು ಸಮರ್ಥನೆ ಮಾಡಿಕೊಳ್ಳಬೇಕು. ಹಾಗಾಗಿ, ಮಾಡಿಕೊಳ್ಳುತ್ತಾರೆ ಎಂದರು.
ಡಿಕೆಶಿ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ, ಅವರು ಆ ಧೈರ್ಯ ಮಾಡಲ್ಲ ಅಂತಾ ಅಂದುಕೊಂಡಿದ್ದೇನೆ. ಆದರೆ, ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕಾರಣಿ… ಹೀಗೆ ಡಿಕೆಶಿಯವರಿಗೆ ಹಲವು ಮುಖಗಳಿವೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD