ಮತ್ತೊಮ್ಮೆ ಹೆಲಿಕಾಫ್ಟರ್ ಗಂಡಾಂತರದಿಂದ ಪಾರಾದ ಡಿ.ಕೆ.ಶಿವಕುಮಾರ್: ಹೆಲಿಪ್ಯಾಡ್ ನಲ್ಲಿ ಬೆಂಕಿ

ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎರಡನೇ ಬಾರಿಗೆ ಹೆಲಿಕಾಫ್ಟರ್ ಅಪಘಾತದಿಂದ ಸ್ವಲ್ಪದಲ್ಲೇ ಪಾರಾಗಿದ್ದಾರೆ. ಇತ್ತೀಚೆಗಷ್ಟೇ ಡಿ.ಕೆ.ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿಯಾತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ.
ಡಿ.ಕೆ.ಶಿವಕುಮಾರ್ ಅವರು ಹೊನ್ನಾವರದ ರಾಮತೀರ್ಥಕ್ಕೆ ಭೇಟಿ ನೀಡಿದ ವೇಳೆ ಹೆಲಿಪ್ಯಾಡ್ ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಫ್ಟರ್ ಇಳಿಯುತ್ತಿದ್ದ ವೇಳೆಯೇ ಹುಲ್ಲುಗಳಿಗೆ ಬೆಂಕಿ ಹತ್ತಿಕೊಂಡು ಬೆಂಕಿ ವ್ಯಾಪಿಸಿದೆ. ಹೆಲಿಕಾಫ್ಟರ್ ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಬೆಂಕಿ ವ್ಯಾಪಿಸುವುದನ್ನು ತಪ್ಪಿಸಿದ್ದಾರೆ. ಹೆಲಿಕಾಫ್ಟರ್ ಪ್ರಯಾಣದ ಸಂದರ್ಭದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿದೆ. ಆದರೆ, ಚುನಾವಣೆ ಕಾರಣ, ಈ ಘಟನೆಗಳು ಬೇರೆಯದ್ದೇ ರೀತಿಯ ಚರ್ಚೆಗಳಿಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw