ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ: ಸಿದ್ದುಗೆ ಡಿಕೆಶಿ ಟಾಂಗ್
ಬೆಂಗಳೂರು: ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ, ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ಮಾಡುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ಈಗ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ನನಗೂ ಇಲ್ಲ, ಸಿದ್ದರಾಮಯ್ಯ ಅವರಿಗೂ ಇಲ್ಲ. ಆ ಅಧಿಕಾರವೇನಿದ್ದರೂ ಎಐಸಿಸಿಗೆ ಮಾತ್ರ ಇದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ, ಹೈಕಮಾಂಡ್ ಗೆ ಮಾತ್ರ ಅಭ್ಯರ್ಥಿ ತೀರ್ಮಾನಿಸುವ ಅಧಿಕಾರ ಇದೆ ಎಂದು ತಿಳಿಸಿದರು.
ಕೊಪ್ಪಳದಲ್ಲಿದ್ದವರನ್ನು ಹುರಿದುಂಬಿಸಲು ಸಿದ್ದರಾಮಯ್ಯ ಹಾಗೆ ಹೇಳಿರಬಹುದು ಅಷ್ಟೇ. ಅಭ್ಯರ್ಥಿಗಳನ್ನು ತೀರ್ಮಾನಿಸುವುದು ಹೈಕಮಾಂಡ್ ಮಾತ್ರ. ರಾಜ್ಯ ನಾಯಕರಲ್ಲ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka