ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!

ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಬುಧವಾರ ರಾತ್ರಿ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ಇಲ್ಲಿ ದೈವ ನರ್ತನ ಮಾಡುತ್ತಿದ್ದ ವೇಳೆ ಕಾಂತು ಅಜಿಲ ಕುಸಿದು ಬಿದ್ದರೆನ್ನಲಾಗಿದೆ.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw