ದಕ್ಷಿಣ ಕನ್ನಡ: ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ - Mahanayaka

ದಕ್ಷಿಣ ಕನ್ನಡ: ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

azim
09/04/2023

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13), ಮೃತ ಬಾಲಕ.

ಈ ಬಾಲಕ ಶನಿವಾರ ಮಧ್ಯಾಹ್ನ ಪಾಣೆಮಂಗಳೂರಿನಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದ ಬಾಲಕನನ್ನು ಸ್ಥಳೀಯರು ಗಮನಿಸಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಬಾಲಕನ ಕೈಯಲ್ಲಿದ್ದ ಮೊಬೈಲ್ ಗೆ ಪೋಷಕರು ಕರೆ ಮಾಡಿದ್ದು, ಬಾಲಕ ಕರೆ ಸ್ವೀಕರಿಸದ ಕಾರಣ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಸಮೀಪ ಬಾಲಕನ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ