ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ: ಪರಿಶಿಷ್ಟ ವಿಭಾಗದ ವಿಶೇಷ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ವಿಭಾಗದ ವಿಶೇಷ ಸಭೆ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ, ಕೆ.ಪಿ.ಸಿ.ಸಿ. ಉಪಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾದ ಎಂ.ಸಿ. ವೇಣುಗೋಪಾಲರವರ ಗೌರವ ಉಪಸ್ಥಿತಿಯಲ್ಲಿ ಮತ್ತು ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರುರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ನ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಸಿ. ವೇಣುಗೋಪಾಲರವರು, ಜಿಲ್ಲೆಯಲ್ಲಿ ಪರಿಶಿಷ್ಟ ಘಟಕವನ್ನು ಬಲಿಷ್ಟಗೊಳಿಸಲು ಎಲ್ಲರೂ ಸಂಘಟಿತರಾಗಿ ಒಮ್ಮತದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಡಿ.ಸಿ. ಮನ್ನಾ ಜಮೀನಿನ ಬಗ್ಗೆ ವಿಭಾಗದ ಮುಖಂಡರು ಪ್ರಸ್ತಾಪಿಸಿದಾಗ, ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಿ ಜಿಲ್ಲಾಡಳಿತ ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಅತೀ ಶೀಘ್ರವಾಗಿ ಪರಿಹರಿಸುವುದಾಗಿ ಭರವಸೆಯನ್ನು ನೀಡಿದರು.
ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ರವರು ಮಾತನಾಡಿ ಕೆಲವೊಂದು ಸಂದರ್ಭದಲ್ಲಿ ನಿಮ್ಮಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ, ಆದರೆ ಪಕ್ಷದ ಹಿತದೃಷ್ಟಿಯಿಂದ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಮಾಜಿ ಸಚಿವರಾದ ರಮನಾಥ ರೈ ಮಾತನಾಡಿ, ಕಾಂಗ್ರೆಸ್ ಪಕ್ಷ ಪರಿಶಿಷ್ಟರ ಪರವಾಗಿ ಯಾವೆಲ್ಲ ಕಾರ್ಯಗಳನ್ನು ಮಾಡಿದೆ ಅನ್ನುವುದನ್ನು ಎಳೆಎಳೆಯಾಗಿ ವಿವರಿಸಿದರು.
ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಮಾತನಾಡಿ, ತಾನು ಜಿಲ್ಲಾಧ್ಯಕ್ಷನಾದ ನಂತರ ಹಲವಾರು ಸಮಾಜಮುಖಿ ಕಾರ್ಯಗಳನ್ನು ಪಕ್ಷದ ಮುಖಂಡರ ಸಹಕಾರದಿಂದ ಮಾಡಲಾಗಿದೆ ಎಂದರು. ಅಲ್ಲದೆ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ಮಾಡಲು ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು.
ಸಭೆಯ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರಾದ ಜನಾರ್ದನ ಚೆಂಡ್ತಿಮಾರ್ ರವರಿಗೆ ನುಡಿನಮನ ಸಲ್ಲಿಸಲಾಯಿತು ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮವಾಗಿ ಪರಿಶಿಷ್ಟ ಸಮುದಾಯದ ಮಹಿಳೆಯನ್ನು ಮಹಿಳಾ ಕಾಂಗ್ರೆಸ್ ನ ಮಂಗಳೂರಿನ ಅಧ್ಯಕ್ಷೆಯಾಗಿ ನೂತನವಾಗಿ ಆಯ್ಕೆ ಮಾಡಲಾದ ಅಪ್ಪಿಯವರನ್ನು ಹಾಗೂ ಮಹಿಳಾ ಕಾಂಗ್ರೆಸಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಉಷಾ ಅಂಚನ್ ರವರನ್ನು ಪರಿಶಿಷ್ಟ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರು, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್ ಮಮತಾ ಗಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಶಿಧರ್ ಹೆಗಡೆ, ನಗರದ ಕಾರ್ಪೋರೇಟರ್ ನವೀನ್ ಡಿಸೋಜಾ, ಕಡಬ ತಾಲೂಕಿನ ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಪಿ.ವರ್ಗಿಸ್, ನೂತನವಾಗಿ ಆಯ್ಕೆಯಾಗಿರುವ ಮಹಿಳಾ ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿರುವ ಉಷಾ ಅಂಚನ್, ನೂತನವಾಗಿ ಆಯ್ಕೆಯಾಗಿರುವ ಮಹಿಳಾ ಕಾಂಗ್ರೆಸ್ ನ ಮಂಗಳೂರಿನ ಜಿಲ್ಲಾಧ್ಯಕ್ಷರಾದ ಅಪ್ಪಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮ್ ಬಳ್ಳಾಲ್ ಬಾಗ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್, ದಕ್ಷಿಣ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರಾದ ರಘುರಾಜ್ ಕದ್ರಿ, ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಸದಸ್ಯರಾದ ಹರಿಯಪ್ಪ ಮುತ್ತೂರು, ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊಡಿಯಲ್ ಬೈಲ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಅದ್ಯಪಾಡಿ, ಪುತ್ತೂರು ತಾಲೂಕು ಅಕ್ರಮ ಸಕ್ರಮ ಸದಸ್ಯರಾದ ರಾಮಣ್ಣ ಪಿಲಿಂಜ, ಮೂಡದ ಸದಸ್ಯರಾದ ಸುಮನ್ ಬೆಂಗ್ರೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರರಾದ ಜಗನ್ನಾಥ್ ಲಾಯಿಲಾ, ದಕ್ಷಿಣ ಕನ್ನಡ ಜಿಲ್ಲೆಯ ಅಲೆಮಾರಿ ನಿಗಮದ ಸದಸ್ಯರಾದ ಶ್ರೀಮತಿ ಇಂದಿರಾ ನಾಗೇಶ್, ಮಂಜನಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸರೋಜಿನಿ ಮಂಜನಾಡಿ,ಮಾಜಿ ಕಾರ್ಪೊರೇಟರ್ ಶ್ರೀಮತಿ ನಾಗವೇಣಿ, ಮಾಜಿ ಕಾರ್ಪೊರೇಟರ್ ಶ್ರೀಮತಿ ವಿಜಯಲಕ್ಷ್ಮಿ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ನಾಗೇಶ್ ಪಿ.ಎಸ್., ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಕೋಡಿಕಲ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಅಣ್ಣು ಖಂಡಿಗ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ದಿನೇಶ್ ಕಾಪಿಕಾಡ್, ಗುರುಪುರ ಬ್ಲಾಕ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಸಂತೋಷ್ ಆಧ್ಯಪಾಡಿ, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ವಿವೇಕ್ ಶಿರ್ತಾಡಿ, ಅಧ್ಯಪಾಡಿ ಪಂಚಾಯತ್ ನ ಸದಸ್ಯರಾದ ಮಾಲತಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಾಬು ಮರಿಕೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಮಹೇಶ್ ಬೆಳ್ಳಾರ್ಕರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿಗಳಾದ ರವಿ ಸುಂಕದಕಟ್ಟೆ, ಅಟ್ರಾಸಿಟಿ ಸಮಿತಿಯ ಜಿಲ್ಲಾ ಸದಸ್ಯರಾದ ಮೋಹನ್ ಚೆಂಡ್ತಿಮಾರ್, ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಚಂದ್ರಿಕ ತಣ್ಣೀರುಬಾವಿ, ಕಿರಣ್ ಕೊಡಿಯಲ್ ಬೈಲ್, ಮಲ್ಲಿಕಾರ್ಜುನ್ ಕೊಡಿಕಲ್, ಮಿಥುನ್ ಉರ್ವ ಸ್ಟೋರ್, ನಂದರಾಜ ಸಂಕೇಶ್ವರ, ಕಮಲಾಕ್ಷ ಬಜಾಲ್, ಲಕ್ಷ್ಮಣ್ ಚೆಂಡ್ತಿಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು. ಗಣೇಶ್ ಮೂಡಬಿದ್ರಿ ಸ್ವಾಗತಿಸಿ , ಪ್ರೇಮ್ ಬಳ್ಳಾಲ್ ಬಾಗ್ ವಂದಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: