ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ - Mahanayaka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ

mangalore ganeshothsava
31/08/2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ‌. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗಣೇಶೋತ್ಸವದ ಸಂಭ್ರಮ ಕಾಣ್ತಿದೆ. ಅಲ್ಲಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು.

ಜಿಲ್ಲೆಯ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಮಿಲನದೊಂದಿಗೆ ಸರ್ವಧರ್ಮದ ಭಗವದ್ಭಕ್ತರ ಸೇವಾ ಮನೋಭಾವದೊಂದಿಗೆ ಅರ್ಥಪೂರ್ಣವಾಗಿ ಮತ್ತು ವೈಭವಯುತವಾಗಿ ಆಚರಿಸಿಕೊಂಡು ಬರುತ್ತಿದ್ದು ಐದು ದಿನಗಳ ಸಂಭ್ರಮಾಚರಣೆಯ ಗಣೇಶೋತ್ಸವ ಜಿಲ್ಲೆ, ರಾಜ್ಯದ ಭಕ್ತಾಭಿಮಾನಿಗಳ ಮನಸೂರೆಗೊಂಡು 19ನೇ ವರ್ಷಕ್ಕೆ ಕಾಲಿರಿಸಿದೆ. ಹಾಗೆಯೇ ಮಂಗಳೂರು ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ.

ಈ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತಿಕಾ ವಿಗ್ರಹವನ್ನು ವಿಜೃಂಭಣೆಯಿಂದ ತರಲಾಯಿತು. ಸೆಪ್ಟೆಂಬರ್ 4ರವರೆಗೆ ಗಣೇಶೋತ್ಸವ ನಡೆಯಲಿದೆ.

ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ ಶ್ರೀ ಮುಕುಂದ್ ಮಾನನೀಯ ಸಹಸರ ಕಾರ್ಯವಾಹ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇವರ ದಿವ್ಯ ಹಸ್ತಗಳಿಂದ ನೆರವೇರಿತು. ವಿವಿಧ ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ