ದಕ್ಷಿಣ ಕನ್ನಡ: ನಾಳೆ(ಜು.2) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ - Mahanayaka

ದಕ್ಷಿಣ ಕನ್ನಡ: ನಾಳೆ(ಜು.2) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ

rain
01/07/2026

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಿ ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ತುರ್ತು ಆದೇಶ ಹೊರಡಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ದಿನಾಂಕ 02.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಕಡ್ಡಾಯ ರಜೆ ಘೋಷಿಸಲಾಗಿದೆ.

ಭಾರಿ ಮಳೆಯ ಮುನ್ನೆಚ್ಚರಿಕೆ ಇರುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಯಾವುದೇ ಕಾರಣಕ್ಕೂ ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ. ಇದರೊಂದಿಗೆ, ಮಕ್ಕಳು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರದ ಬಳಿ ಹೋಗದಂತೆ ಪಾಲಕರು ತೀವ್ರ ಜಾಗ್ರತೆ ವಹಿಸಬೇಕು ಮತ್ತು ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಲಾಗಿದೆ.

ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ಇದ್ದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕಿದೆ. ಅಧಿಕಾರಿಗಳು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುತ್ತಾ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಹಾಗೂ ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಲು ಆದೇಶಿಸಲಾಗಿದೆ.

ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಅಧಿಕೃತ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ