ದಕ್ಷಿಣ ಕನ್ನಡದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜಾತ್ಯತೀತ ಜನತಾದಳದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದರು.
ಮಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ಅದರಲ್ಲಿ ಆಯ್ಕೆಯಾದ ಮೂರು ಹೆಸರುಗಳ ಪೈಕಿ ಒಂದನ್ನು ಆಯ್ಕೆ ಮಾಡಿ ಹೈಕಮಾಂಡ್ ಗೆ ಸಲ್ಲಿಸಲಾಗುತ್ತದೆ. ಈ ಬಳಿಕ ರಾಜ್ಯಾಧ್ಯಕ್ಷರು ಈ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.
ಫೆಬ್ರವರಿ ಮೊದಲ ವಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯ ಮೂಲಕ ದಕ್ಷಿಣ ಕನ್ನಡದಲ್ಲಿ ಸಭೆ ನಡೆಸುವ ಕುರಿತು ನಿರ್ಧಾರವಾಗಿದೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw