ದಕ್ಷಿಣ ಕನ್ನಡ—ಉಡುಪಿ ಜಿಲ್ಲೆಯಲ್ಲಿ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ತಾಪ ಏರಿಕೆಯಾಗುತ್ತಿದೆ. ಎಪ್ರಿಲ್ 30 ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಮುಂದಿನ 3–4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲೂ ಬಿಸಿಗಾಳಿ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಬಿಸಿಗಾಳಿ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೀಗಾಗಿ ಈ ಎಲ್ಲ ಜಿಲ್ಲೆಗಳ ಜನರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.
ಬಿಸಿಗಾಳಿಯಿಂದಾಗಿ ಉಂಟಾಗುವ ಸನ್ ಸ್ಟೋಕ್ ಮತ್ತಿತರ ಸಮಸ್ಯೆಗಳಿಂದ ಪಾರಾಗಲು ಮಧ್ಯಾಹ್ನ 1 ರಿಂದ ಅಪರಾಹ್ನ 3 ರವರೆಗೆ ಹೊರಗೆ ಹೋಗಬಾರದಿರುವುದು ಉತ್ತಮ. ತೆಳುವಾದ, ಹಗುರವಾದ ಬಟ್ಟೆಗಳನ್ನು ಧರಿಸಬೇಕು, ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು ಎಂದು ನಿರ್ದೇಶನ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗರಿಷ್ಠ ತಾಪಮಾನ ಗುರುವಾರಕ್ಕೆ 34 ಡಿಗ್ರಿ ಸೆಲ್ಸಿಯಸ್ ಇದ್ದರೆ, ಶುಕ್ರವಾರ ಗರಿಷ್ಠ 34.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth