ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೆಯ ಸ್ಥಾನ - Mahanayaka
7:16 AM Thursday 18 - September 2025

ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೆಯ ಸ್ಥಾನ

puc examination result
18/06/2022

ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿಯ ಫಲಿತಾಂಶದಲ್ಲಿ ಶೇ.0.8 ಹೆಚ್ಚಾಗಿದೆ.


Provided by

ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು.

ಈ ವೇಳೆ ಫಲಿತಾಂಶದ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,  ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. ಮೂರು ವಿಭಾಗದಲ್ಲಿ ಒಟ್ಟಾರೆ ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ ಎಂದು ತಿಳಿಸಿದರು.

ಇನ್ನು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು http://www.karresults.nic.in/slpuind.asp  ವೆಬ್​ ಸೈಟ್​ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಇನ್ನೂ ಅಭ್ಯರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ  ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗುರುದ್ವಾರದಲ್ಲಿ ಸ್ಫೋಟ: ಇಬ್ಬರು ಸಾವು, ಹಲವರನ್ನು ಒತ್ತೆಯಾಳಾಗಿಸಿದ ಉಗ್ರರು

ನೋ ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿದವರ ಮಾಹಿತಿ ನೀಡಿದವರಿಗೆ 500 ರೂ. ಬಹುಮಾನ!

ಸಾಯಿ ಪಲ್ಲವಿ ನಟನೆಯ  ‘ವಿರಾಟ ಪರ್ವಂ’ ಬಹಿಷ್ಕಾರಕ್ಕೆ ಬಲಪಂಥೀಯರ ಕರೆ!

ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿಯ ಅನುಮಾನಾಸ್ಪದ ಸಾವು!

ಇತ್ತೀಚಿನ ಸುದ್ದಿ