ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಪೈಕಿ ಇಬ್ಬರು ಪೊಲೀಸರು

ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಬ್ಬರು ಪೊಲೀಸರು ಕೂಡ ಆರೋಪಿಗಳಾಗಿದ್ದು, ಸದ್ಯ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ.
ಖಾಜುವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿತ್ತು. ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್’ಸ್ಟೆಬಲ್ ಗಳು ಸೇರಿದಂತೆ ಮೂವರು ವ್ಯಕ್ತಿಗಳು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಕೂಡಲೇ ಇಬ್ಬರೂ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಓಂ ಪ್ರಕಾಶ್ ತಿಳಿಸಿದ್ದಾರೆ.
ಪೊಲೀಸರಾದ ಮನೋಜ್ ಮತ್ತು ಭಗೀರಥ ಮೂರನೇ ಆರೋಪಿಯೊಂದಿಗೆ ಯುವತಿಯನ್ನು ಮನೆಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 376-ಡಿ (ಗ್ಯಾಂಗ್ ರೇಪ್) ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಖಜುವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಮೃತ ಯುವತಿಯ ಮರಣೋತ್ತರ ಪರೀಕ್ಷೆ ಕುಟುಂಬಸ್ಥರು ನಿರಾಕರಿಸಿದ್ದು, ಸದ್ಯ ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ಹೇಳಿದ್ದಾರೆ.
ಘಟನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ, ಘಟನೆಯ ಬಗ್ಗೆ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw