ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಸಂಘಪರಿವಾರದ ಕಾರ್ಯಕರ್ತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಪೆರುವಾಯಿ ನಿವಾಸಿ ಜಯಪ್ರಕಾಶ್ (38) ಬಂಧಿತ ಆರೋಪಿ. ಪೆರುವಾಯಿಯ ರಾಜ ಎಂಬಾತ ಇನ್ನೋರ್ವ ಆರೋಪಿಯಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನೊಂದ ಬಾಲಕಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ರವಿವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಲಾಗಿದೆ. ಒಟ್ಟು ನಾಲ್ಕು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw