ದಲಿತ ನಾಯಕ, ಬೆಳ್ತಂಗಡಿ ತಾ.ಪಂ. ಮಾಜಿ ಉಪಾಧ್ಯಕ್ಷ ಚಂದು ಎಲ್. ನಿಧನ - Mahanayaka
6:08 AM Saturday 25 - October 2025

ದಲಿತ ನಾಯಕ, ಬೆಳ್ತಂಗಡಿ ತಾ.ಪಂ. ಮಾಜಿ ಉಪಾಧ್ಯಕ್ಷ ಚಂದು ಎಲ್. ನಿಧನ

chandu l
20/06/2024

ಬೆಳ್ತಂಗಡಿ: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಇದರ ರಾಜ್ಯ ಸಂಘಟನಾ ಸಂಚಾಲಕರು ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತಿನ ಮಾಜಿ ಉಪಾಧ್ಯಕ್ಷರಾಗಿದ್ದ ಚಂದು ಎಲ್. ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಚಂದು ಎಲ್. ರವರ ಅಂತ್ಯಕ್ರಿಯೆನ್ನು ಮೃತರ ಸ್ವಗೃಹ ಬೆಳ್ತಂಗಡಿ ತಾಲೂಕಿನ  ಲಾಯಿಲ ಗ್ರಾಮದ ನಿನ್ನಿಕಲ್ಲು ಮನೆಯಲ್ಲಿ ನಡೆಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತರ ಸಾರ್ವಜನಿಕ ಅಂತಿಮ ದರ್ಶನ ಗುರುವಾರ(ಜೂ.20) ಬೆಳಿಗ್ಗೆ 10 ಗಂಟೆಯಿಂದ 12ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಲಾಯಿಲ ಗ್ರಾಮದ ಪಡ್ಲಾಡಿ “ಡಾ ಬಿ‌ ಆರ್ ಅಂಬೇಡ್ಕರ್ ಭವನ ” ದಲ್ಲಿ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ