ಮರಕ್ಕೆ ಕಟ್ಟಿ ಹಾಕಿ ದಲಿತ ಮಹಿಳೆಗೆ ಹಲ್ಲೆ: ನಾಲ್ವರ ಬಂಧನ - Mahanayaka

ಮರಕ್ಕೆ ಕಟ್ಟಿ ಹಾಕಿ ದಲಿತ ಮಹಿಳೆಗೆ ಹಲ್ಲೆ: ನಾಲ್ವರ ಬಂಧನ

polices
19/03/2025


Provided by

ಉಡುಪಿ: ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಮೂಲದ ದಲಿತ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಮಾ. 18ರಂದು ಈ ಘಟನೆ ನಡೆದಿದ್ದು, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆ ಸಂಬಂಧ ಹಲ್ಲೆಗೊಳಗಾಗಿದ್ದ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ  ಆರೋಪಿಗಳಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ ಮಹಿಳೆಗೆ ಹಲ್ಲೆ ನಡೆಸಿರುವವರನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ವಿಡಿಯೋದಲ್ಲಿ ಪರಿಶೀಲನೆ ನಡೆಸಿ ಕಾನೂನು ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ