8:04 PM Thursday 29 - January 2026

ದಲಿತ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ 300 ರೂ.ಗೆ ವಿಡಿಯೋ ಮಾರಾಟ ಮಾಡಿದ ಪಾಪಿಗಳು

31/01/2021

ಬಾದಾನ್: ಅತ್ಯಾಚಾರಿಗಳ ಸ್ವರ್ಗ ಎಂದೇ ಕರೆಯಲ್ಪಡುತ್ತಿರುವ ಉತ್ತರ ಪ್ರದೇಶದ ಮೀರತ್ ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, 15ರಿಂದ 17 ವರ್ಷ ವಯಸ್ಸಿನ  6 ಅಪ್ರಾಪ್ತ ವಯಸ್ಕರು 36 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಉತ್ತರ ಪ್ರದೇಶದ ಮೀರತ್ ಬಳಿಯ ಬಾದೌನ್‌ ದಲಿತ ಮಹಿಳೆ ಅತ್ಯಾಚಾರಕ್ಕೊಳಗಾದವರಾಗಿದ್ದಾರೆ. ಆರೋಪಿಗಳಲ್ಲಿ ಐವರು ಬಾಲಕರು ಮಹಿಳೆಯ ಮೇಲೆ ಅಮಾನವೀಯವಾಗಿ ಥಳಿಸಿ ಹೊಲವೊಂದಕ್ಕೆ ಎಳೆದುಕೊಂಡು ಹೋಗಿದ್ದು, ಅಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಘಟನೆಯನ್ನು ವಿಡಿಯೋ ಕೂಡ ಮಾಡಿದ್ದಾರೆ.

ಮಹಿಳೆಯ ಮೇಲೆ ಅತ್ಯಾಚಾರ ನಡೆಸುತ್ತಿರುವುದನ್ನು ಹಲವು ವಿಡಿಯೋ ಮಾಡಲಾಗಿದೆ.  ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶನಿವಾರ ಈ ಘೋರ ಘಟನೆ ಬೆಳಕಿಗೆ ಬಂದಿದೆ.

ಮಹಿಳೆಯನ್ನು ಅತ್ಯಾಚಾರ ಮಾಡಿ ವಿಡಿಯೋ ಮಾಡಿದ ಈ ಅಪ್ರಾಪ್ತ ವಯಸ್ಕರು, ವಿಡಿಯೋವನ್ನು 300 ರೂಪಾಯಿಗಳಿಗೆ ಮಾರಾಟ ಮಾಡಿದ್ದರು ಎನ್ನುವುದು ಇದೀಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

ಮಹಿಳೆಯು ಈ ಕಾಮುಕರ ಕೃತ್ಯದಿಂದ ಭಯಭೀತರಾಗಿ ಈ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ವಿಡಿಯೋ ಮಾಡಿದ ಬಳಿಕ, ಈ ವಿಚಾರ ಯಾರಿಗಾದರೂ ಹೇಳಿದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯ ಬಿಡುವುದಾಗಿ ಆರೋಪಿಗಳು ಬೆದರಿಸಿದ್ದರಿಂದ ಘಟನೆ ನಡೆದು ತಿಂಗಳುಗಳು ಕಳೆದರೂ ಮಹಿಳೆ ಸುಮ್ಮನಿದ್ದರು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

Exit mobile version