ದಲಿತರು ದೇವಸ್ಥಾನದ ಕಾಂಪೌಂಡ್ ಪ್ರವೇಶಿಸಿದ್ದಕ್ಕೆ, ದೇಗುಲಕ್ಕೆ ಬೀಗ, ಎರಡೂವರೆ ಲಕ್ಷ ದಂಡ…!
ಚಿಕ್ಕಮಗಳೂರು: ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಹೋದರು ಎಂದು ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎರಡು ದಿನದ ಹಿಂದೆ ಬಿ.ಕೋಡಿಹಳ್ಳಿ ಗ್ರಾಮದ ಮಂಜಪ್ಪ ಹಾಗೂ ಮದನ್ ಎಂಬುವರು ಗ್ರಾಮದ ಆಂಜನೇಯ ದೇವಸ್ಥಾನದ ಕಾಂಪೌಂಡ್ ಒಳಗೆ ಹೋಗಿದ್ದರು. ಅದಕ್ಕೆ ಗ್ರಾಮದ ಸವರ್ಣೀಯರು ಆ ಇಬ್ಬರಿಗೂ ದಂಡ ಹಾಕಿ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ.
ಎರಡು ದಿನದಿಂದ ಆಂಜನೇಯನಿಗೆ ಪೂಜೆ ಕೂಡ ನಿಂತಿದೆ. ಮಂಜಪ್ಪ ಹಾಗೂ ಮದನ್ ಎಂಬ ಇಬ್ಬರಿಗೂ ಗ್ರಾಮಸ್ಥರು ದಂಡ ಹಾಕಿದ್ದಾರೆ. ದೇವಸ್ಥಾನದ ಪೂಜೆ ನಡೆಯಬೇಕು ಅಂದರೆ ಎರಡೂವರೆ ಲಕ್ಷ ಹಣ ನೀಡಬೇಕು ಎಂದು ಹೇಳಿದ್ದಾರೆ.
ದೇವಸ್ಥಾನದ ಗರ್ಭಗುಡಿ ಹಾಗೂ ಕಾಂಪೌಂಡ್ ಶುದ್ಧೀಕರಣಕ್ಕಾಗಿ ಎರಡೂವರೆ ಲಕ್ಷ ಹಣ ನೀಡಿದ್ರೆ ದೇವಸ್ಥಾನದಲ್ಲಿ ಮತ್ತೆ ಪೂಜೆ ನಡೆಯಲಿದೆ ಎಂದು ಆಗ್ರಹಿಸಿದ್ದಾರೆ.
ದೇವಸ್ಥಾನಕ್ಕೆ ಎರಡೂವರೆ ಲಕ್ಷ ಹಣ ನೀಡಿ ನೀವು ಕಾಂಪೌಂಡ್ ನಿಂದ ಹೊರಗೆ ನಿಂತು ಪೂಜೆ ಮಾಡಿಸಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಈ ಬಗ್ಗೆ ದೇವಸ್ಥಾನದ ಕಾಂಪೌಂಡ್ ಒಳ ಹೋಗಿದ್ದಕ್ಕೆ ಗ್ರಾಮಸ್ಥರು ದೇವಸ್ಥಾನಕ್ಕೆ ಬೀಗ ಹಾಕಿ, ದಂಡ ಹಾಕಿದ್ದಾರೆ ಎಂದು ಆರೋಪಿಸಿ ಮಂಜಪ್ಪ ತಹಶೀಲ್ದಾರ್ ಗೆ ದೂರು ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: