ಸಂವಿಧಾನ ತಿದ್ದುಪಡಿ ಹೇಳಿಕೆಯಿಂದ ಬಿಜೆಪಿಗೆ ಡ್ಯಾಮೇಜ್: ಅನಂತ್ ಕುಮಾರ್ ಹೆಗಡೆ ವಿರುದ್ಧ ಆರ್.ಅಶೋಕ್ ಕಿಡಿ - Mahanayaka
12:01 PM Tuesday 28 - October 2025

ಸಂವಿಧಾನ ತಿದ್ದುಪಡಿ ಹೇಳಿಕೆಯಿಂದ ಬಿಜೆಪಿಗೆ ಡ್ಯಾಮೇಜ್: ಅನಂತ್ ಕುಮಾರ್ ಹೆಗಡೆ ವಿರುದ್ಧ ಆರ್.ಅಶೋಕ್ ಕಿಡಿ

anathakura
11/03/2024

ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆಯ ‘ಸಂವಿಧಾನ ತಿದ್ದುಪಡಿ’ ಹೇಳಿಕೆ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಹೊಡೆತ ನೀಡಿದೆ. ಕಳೆದ ಚುನಾವಣೆಯಲ್ಲಿ ಕೂಡ ಕೆಲವು ನಾಯಕರು ಆಡಿದ್ದ ದ್ವೇಷ ಭಾಷಣಗಳು ಬಿಜೆಪಿಗೆ ದೊಡ್ಡ ಹೊಡೆತ ನೀಡಿತ್ತು.

ಇದೀಗ ಅನಂತ್ ಕುಮಾರ್ ಹೆಗಡೆಯ ಹೇಳಿಕೆ ವಿರೋಧ ವ್ಯಕ್ತಪಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನಿಸಿದ್ದಾರೆ.

ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಅಸಂಖ್ಯಾತ ಮಹನೀಯರ ತ್ಯಾಗದ ದ್ಯೋತಕ, ಆಶಯಗಳ ಪ್ರತೀಕ ಎಂದು ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.

ಸಂವಿಧಾನಕ್ಕೆ ಅಪಚಾರ ಮಾಡುವ ಅಥವಾ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೆಲಸವನ್ನ ಬಿಜೆಪಿ ಈ ಹಿಂದೆಯೂ ಮಾಡಿಲ್ಲ, ಮುಂದೆಂದಿಗೂ ಮಾಡುವುದೂ ಇಲ್ಲ. ಅಷ್ಟೇ ಅಲ್ಲ ಅಂತಹ ಮಾತು ಆಡುವುದನ್ನು ಸಹಿಸುವುದೂ ಇಲ್ಲ ಎಂದು ಆರ್.ಅಶೋಕ್ ಹೇಳಿದ್ದಾರೆ.

ಅನಂತ್ ಕುಮಾರ್ ಹೆಗಡೆ ನೀಡಿದ ಹೇಳಿಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಅಸ್ತ್ರವಾಗಲಿದೆ, ಸಂವಿಧಾನದ ಬಗ್ಗೆ ಇದೀಗ ರಾಜ್ಯದಲ್ಲಿ ಸಾಕಷ್ಟು ಜನರಲ್ಲಿ ಜಾಗೃತಿ ಮೂಡಿಸಿದೆ. ಇಂತಹ ಸಂದರ್ಭದಲ್ಲಿ ಅನಂತ್ ಕುಮಾರ್ ಹೆಗಡೆ ತನ್ನ ಕ್ಷೇತ್ರದಲ್ಲಿ ತಾನು ಗೆಲ್ಲಲು ಇಡೀ ರಾಜ್ಯದಲ್ಲಿ ಬಿಜೆಪಿಗೆ ಡ್ಯಾಮೇಜ್ ಮಾಡುವ ಹೇಳಿಕೆ ನೀಡಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ