ಗ್ರಾ.ಪಂ.ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಂಪತಿಯ ಮೇಲೆ ಗುಂಡಿನ ದಾಳಿ
ಥಾಣೆ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ದಂಪತಿಯನ್ನು ಭಾನುವಾರ ಬೆಳಗ್ಗೆ ಗುಂಡು ಹಾರಿಸಿ ಹತ್ಯೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಮೂರು ಸುತ್ತು ಗುಂಡು ಹಾರಿಸಿದ್ದಾರೆ.
ಭಿವಂಡಿ ಸಮೀಪ ಕಲ್ಲೇರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 12:30ರ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ಮೂರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ನರ್ಪೋಲಿ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಗುಂಡು ಹಾರಿಸಿದರೂ ದಂಪತಿ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.
ಜನವರಿ 15ರಂದು ಮಹಾರಾಷ್ಟ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಿದ್ದು, ಈ ಚುನಾವಣೆಗೆ ದಂಪತಿ ನಾಮಪತ್ರ ಸಲ್ಲಿಸಿದ್ದರು. ಸದ್ಯ ಘಟನೆ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈವರೆಗೆ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.