ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡಾನ್ಸ್: ನಾಲ್ವರು ವಿದ್ಯಾರ್ಥಿಗಳ ಅಮಾನತು

burkha
09/12/2022

ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ  ನಡೆದಿದೆ.

ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು. ಇದಾದ ಬಳಿಕ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯನ್ನೇರಿ ನೃತ್ಯ ಪ್ರದರ್ಶಿಸಿದ್ದಾರೆ.

ಈ ವೀಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version