ಕಷ್ಟಪಟ್ಟು ಮೇಲೆ ಬಂದಿದ್ದ ದರ್ಶನ್ ಜೀವನ ಹಾಳು ಮಾಡಿಕೊಂಡರು: ನಟಿ ರಮ್ಯಾ

ಬೆಂಗಳೂರು: ಲೈಟ್ ಬಾಯ್ ಆಗಿ ಬಂದ ದರ್ಶನ್ ಅವರು ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನವನ್ನು ಹಾಳು ಮಾಡಿಕೊಂಡರು ಎಂದು ನಟಿ ರಮ್ಯಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ ಎಂದರು.
ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟ ಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD