ಕಿಚ್ಚ ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದ ದರ್ಶನ್: ಅಭಿಮಾನಿಗಳಿಗೆ ಸಂಭ್ರಮ - Mahanayaka

ಕಿಚ್ಚ ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದ ದರ್ಶನ್: ಅಭಿಮಾನಿಗಳಿಗೆ ಸಂಭ್ರಮ

darshan tweet
21/12/2022


Provided by

ನಟ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದು ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಅವರು ಘಟನೆಯ ಬಗ್ಗೆ  ಸುದೀರ್ಘವಾದ ಬರಹ ಬರೆದು ಘಟನೆಯನ್ನು ಖಂಡಿಸಿದ್ದರು. ಇದೀಗ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ದರ್ಶನ್ ಅವರು ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.

@KicchaSudeep ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು  ಎಂದು ದರ್ಶನ್ ಅವರು ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ಟ್ವಿಟ್ಟರ್ ನಲ್ಲಿ ಭಾರೀ ವೈರಲ್ ಆಗಿದೆ. ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳು ದರ್ಶನ್ ಅವರ ಟ್ವೀಟ್ ನ್ನು ಸಾವಿರಾರು ಸಂಖ್ಯೆಯಲ್ಲಿ ರಿಟ್ವೀಟ್ ಮಾಡುತ್ತಿದ್ದು, ಕ್ಷಣ ಕ್ಷಣಕ್ಕೂ ಟ್ವೀಟ್ ನ ಸಂಖ್ಯೆ ದ್ವಿಗುಣವಾಗುತ್ತಲೇ ಹೋಗುತ್ತಿದೆ.

ಕಿಚ್ಚ ಸುದೀಪ್ ಅವರ ಬಗ್ಗೆ ದರ್ಶನ್ ಅವರು ಹೀಗೆ ಟ್ವೀಟ್ ಮಾಡಬೇಕಾದ್ರೆ, ಡಿ ಬಾಸ್ ಹೃದಯದಲ್ಲಿ ಸುದೀಪ್ ಅವರಿಗೆ ಜಾಗ ಇದೆ ಎಂದರ್ಥ ಎಂದು ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಅಂತೂ ಇಂತು ಒಂದು ಕಹಿ ಘಟನೆ ಕನ್ನಡ ಚಿತ್ರರಂಗದಲ್ಲಿ ಒಂದು ದೊಡ್ಡ ಬದಲಾವಣೆಗೆ ಕಾರಣವಾಗಿದೆ.  ಅಪ್ಪು ಹೆಸರಿಗೆ ಕಳಂಕ ತರಲು ಕಿಡಿಗೇಡಿಗಳು ದರ್ಶನ್ ಮೇಲೆ ಚಪ್ಪಲಿ ಎಸೆದರು, ಆದರೆ ಇಂದು ಇಡೀ ಕರ್ನಾಟಕದ ಜನರು ದರ್ಶನ್ ಅವರಿಗೆ ಪ್ರೀತಿಯ ಹೂವು ಎಸೆಯುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ದರ್ಶನ್ ಹಾಗೂ ಸುದೀಪ್ ಅವರನ್ನು ಒಂದು ಮಾಡಿದ್ದಾರೆ ಎನ್ನುವ ಸಂಭ್ರಮದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ