ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ: ಹೈಕೋರ್ಟ್ ನಲ್ಲಿ ವಾದ ಮಂಡಿಸಿದ ದರ್ಶನ್ ಪರ ವಕೀಲರು
22/10/2024
ಬೆಂಗಳೂರು: ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ನಡೆಯಿತು.
ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ದರ್ಶನ್ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇರುವುದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು.
ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: