ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ದರ್ಶನ್ ಪತ್ನಿ ವಿಜಯ ಲಕ್ಷ್ಮೀ

ಪವಿತ್ರಾ ಗೌಡಗೆ ಅಶ್ಲೀಲ ಫೋಟೋ, ಸಂದೇಶದ ಕಳುಹಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪತ್ನಿ ವಿಜಯ ಲಕ್ಷ್ಮೀ ಆಗಮಿಸಿದ್ದಾರೆ ಎನ್ನಲಾಗಿದೆ.
ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ದರ್ಶನ್ ಅವರನ್ನು ಕುಟುಂಬಸ್ಥರು ಭೇಟಿ ಮಾಡುತ್ತಿದ್ದಾರೆ. ಕಪ್ಪು ಬಣ್ಣದ ಕಾರಿನಲ್ಲಿ ಆಗಮಿಸಿದ ವಿಜಯಲಕ್ಷ್ಮೀ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ತನಿಖಾಧಿಕಾರಿ ಮುಂದೆ ಶೂ ಗಳು ಸಿಕ್ಕಿರುವ ಬಗ್ಗೆ ಮಾಹಿತಿ ನೀಡಲು ವಿಜಯಲಕ್ಷ್ಮೀ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಪ್ರಕರಣದ ಕುರಿತಾಗಿ ವಿಜಯಲಕ್ಷ್ನೀ ತನಿಖೆ ಎದುರಿಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97