ಸಿಪಿಐಎಂ ಹಿರಿಯ ಮುಖಂಡ ದಾಸ ಭಂಡಾರಿ ನಿಧನ - Mahanayaka

ಸಿಪಿಐಎಂ ಹಿರಿಯ ಮುಖಂಡ ದಾಸ ಭಂಡಾರಿ ನಿಧನ

dasa bhandari
23/11/2022


Provided by

ಕುಂದಾಪುರ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು‌. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ಸ್ವಗ್ರಹದಲ್ಲಿ ನಿಧನರಾದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿಯೂ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ. ಯು ದಾಸ ಭಂಡಾರಿ ಅವರ ನಿಧನಕ್ಕೆ ಸಿಪಿಐಎಂ, ತಾಲೂಕು‌ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಸಂಘ, ಕೃಷಿಕೂಲಿಕಾಋ ಸಂಘ ಸೇರಿದಂತೆ ವಿವಿಧ ಕಾರ್ಮಿಕ‌ ಸಂಘಟನೆಗಳು‌ ಸಂತಾಪ ವ್ಯಕ್ತಪಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ