ಪ್ರಿಯಕರ ಮತ್ತು ಆತನ ಸ್ನೇಹಿತನೊಂದಿಗೆ ರಾತ್ರಿ ಮನೆಗೆ ಬಂದ ಮಗಳು: ನಡೆಯಿತು ಘೋರ ಕೃತ್ಯ

nethravati
31/10/2025

ಬೆಂಗಳೂರು: ತಾಯಿಯನ್ನು ಆಕೆಯ ಅಪ್ರಾಪ್ತ ಮಗಳು ತನ್ನ ಸ್ನೇಹಿತರೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನೇತ್ರಾವತಿಯ (34) ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರ ಮೃತದೇಹ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ನೇತ್ರಾವತಿ ಅವರ ಮಗಳು ನಾಪತ್ತೆಯಾಗಿದ್ದರಿಂದ ಪೊಲೀಸರಿಗೆ ಅನುಮಾನ ಮೂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ವೇಳೆ ಮಗಳ ಅಸಲಿ ರೂಪ ಬಹಿರಂಗಗೊಂಡಿದೆ.

ಆ ದಿನ ನಡೆದಿದ್ದೇನು?

ನೇತ್ರಾವತಿ ಅವರ ಅಪ್ರಾಪ್ತ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಶನಿವಾರ ರಾತ್ರಿ ಆಕೆ ತನ್ನ ಪ್ರಿಯಕರ ಹಾಗೂ ಮೂವರ ಸ್ನೇಹಿತರನ್ನು ಕರೆದುಕೊಂಡು ತನ್ನ ಮನೆಗೆ ಬಂದಿದ್ದಾಳೆ. ಮಗಳು ಮತ್ತು ಯುವಕರ ವರ್ತನೆಗೆ ನೇತ್ರಾವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಇದು ಜಗಳಕ್ಕೆ ತಿರುಗಿದ್ದು, ಈ ವೇಳೆ ಕೋಪಗೊಂಡ ಮಗಳು ಹಾಗೂ ಆಕೆಯ ಸ್ನೇಹಿತರು ನೇತ್ರಾವತಿ ಅವರ ಬಾಯಿ ಮುಚ್ಚಿ ಟವಲ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತುಹಾಕಿ  ಮನೆ ಲಾಕ್ ಮಾಡಿ ಎಸ್ಕೇಪ್ ಆಗಿದ್ದರು.

ಕೊಲೆ ಬಯಲು:

ನೇತ್ರಾವತಿ ಶವ ಪತ್ತೆಯಾದ ನಂತರ ಸುಬ್ರಹ್ಮಣ್ಯಪುರ ಪೊಲೀಸರು ಪ್ರಾಥಮಿಕವಾಗಿ ಅಸಹಜಸಾವು ಪ್ರಕರಣ ದಾಖಲಿಸಿದ್ದರು. ಘಟನೆಯ ನಂತರ ನೇತ್ರಾವತಿ ಅವರ ಮಗಳ ನಾಪತ್ತೆಯಾಗಿರುವ ಬಗ್ಗೆ ನೇತ್ರಾವತಿಯವರ ಅಕ್ಕ ದೂರು ನೀಡಿದ್ದರು. ಇದರನ್ವಯ ಪೊಲೀಸರು ಮಗಳು ಹಾಗೂ ಆಕೆಯ ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಿಸಿದ ವೇಳೆ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ಐವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version