ಮಕ್ಕಳಾಗಿಲ್ಲ ಎಂದು ಕಲ್ಲಿನಿಂದ ಜಜ್ಜಿ ಸೊಸೆಯ ಹತ್ಯೆ: ಅಪಘಾತ ಎಂದು ಬಿಂಬಿಸಲು ಯತ್ನ!

ಚಿಕ್ಕೋಡಿ (Belgaum): ಸೊಸೆಗೆ ಮಕ್ಕಳಾಗಿಲ್ಲ ಎನ್ನುವ ಕಾರಣಕ್ಕೆ ಆಕೆಯ ಅತ್ತೆಯೇ ಅಮಾನವೀಯವಾಗಿ ಹತ್ಯೆ ನಡೆಸಿ, ಅಪಘಾತ ಎಂದು ಬಿಂಬಿಸಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಹತ್ಯೆಯಾದ ಮಹಿಳೆಯಾಗಿದ್ದಾರೆ. ಕಳೆದ ಶನಿವಾರದಂದು ಈಕೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ.
ಮೇ 17ರಂದು ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಇವರು ತಮ್ಮ ಮೋಟಾರ್ ಸೈಕಲ್ ಮೇಲೆ ಅವರ ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ, ಬಳಿಕ ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತು ಹೋಗಿರುವುದಾಗಿ ಬಿಂಬಿಸಲು ಕೊಲೆಗಾರರು ಯತ್ನಿಸಿದ್ದರು ಎಂದು ಬೆಳಗಾವಿ ಎಸ್.ಪಿ. ಭೀಮಶಂಕರ್ ಗುಳೇದ್(S.P. Bhimashankar Guled) ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD