ಮಗಳ ಮೇಲೆಯೇ ಅರ್ಚಕನಿಂದ ಅತ್ಯಾಚಾರ: ಬಾಲಕಿ ಗರ್ಭೀಣಿಯಾದ ಬೆನ್ನಲ್ಲೇ ಆರೋಪಿಯ ಬಂಧನ - Mahanayaka

ಮಗಳ ಮೇಲೆಯೇ ಅರ್ಚಕನಿಂದ ಅತ್ಯಾಚಾರ: ಬಾಲಕಿ ಗರ್ಭೀಣಿಯಾದ ಬೆನ್ನಲ್ಲೇ ಆರೋಪಿಯ ಬಂಧನ

venkatesha karantha
18/11/2022

ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಆರೋಪದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತುಂಬೆಯ ದೇವಸ್ಥಾನವೊಂದರ ಅರ್ಚಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ತುಂಬೆ ರಾಮ ನಿವಾಸ ನಿವಾಸಿ ವೆಂಕಟೇಶ ಕಾರಂತ ಬಂಧಿತ ಆರೋಪಿ. ಈತ ತುಂಬೆಯ ದೇವಸ್ಥಾನವೊಂದರಲ್ಲಿ ಅರ್ಚಕನಾಗಿದ್ದು, ಮಲಮಗಳ ಮೇಲೆಯೇ ಹಲವು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಬಾಲಕಿಯ ತಾಯಿ ವೆಂಕಟೇಶ್ ನನ್ನು ಎರಡನೇ ಮದುವೆಯಾಗಿದ್ದು, ಬಾಲಕಿಯ ಇವರ ಜೊತೆಯಲ್ಲಿ ವಾಸವಾಗಿದ್ದಳು. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದಲ್ಲಿ ವೆಂಕಟೇಶ ಕಾರಂತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ