ಪ್ರಧಾನಿಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದ ಖರ್ಗೆ

ರಾಜಸ್ಥಾನದಲ್ಲಿ ಬನ್ಸ್ವಾರದಲ್ಲಿ ನಡೆದ ಬಿಜೆಪಿಯ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕಿಸುತ್ತಾ ಪ್ರಧಾನಿ ಮೋದಿ ಮುಸ್ಲಿಮರ ಬಗ್ಗೆ ದ್ವೇಷದ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ರಾಜಸ್ಥಾನದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಮೋದಿಯ ಹೇಳಿಕೆಯನ್ನು ದ್ವೇಷದ ಹೇಳಿಕೆ ಎಂದು ಖರ್ಗೆ ಬಣ್ಣಿಸಿದ್ದಾರೆ. ಇದು ಮೊದಲ ಹಂತದ ಲೋಕಸಭೆ ಚುನಾವಣೆಯ ಬಗ್ಗೆ ಬಿಜೆಪಿಗಿರುವ ಭೀತಿ ಮತ್ತು ನಿರಾಶೆಯನ್ನು ತೋರಿಸುತ್ತದೆ. ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಮತ್ತು ಹಿಂದೂ ಪದಗಳ ಉಲ್ಲೇಖವಿಲ್ಲ ಮತ್ತು ಎಲ್ಲರಿಗೂ ಸಮಾನತೆ ಮತ್ತು ನ್ಯಾಯದ ಬಗ್ಗೆ ಮಾತನಾಡುತ್ತದೆ. ಇಂಡಿಯಾ ಮೈತ್ರಿಕೂಟವು ಮೊದಲ ಸುತ್ತಿನಲ್ಲಿ ಗೆದ್ದಿರುವುದನ್ನು ಮನಗಂಡ ನಂತರ ಪ್ರಧಾನಿ ಮೋದಿ “ದ್ವೇಷ” ಭಾಷಣ ಮಾಡಿದ್ದಾರೆ. ಭಾರತದ ಇತಿಹಾಸದಲ್ಲಿ, ಯಾವುದೇ ಪ್ರಧಾನಿ ಮೋದಿಯಂತೆ ‘ತಮ್ಮ ಹುದ್ದೆಯ ಘನತೆಯನ್ನು ಕಡಿಮೆ ಮಾಡಿಲ್ಲ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth