ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ದಿನ: ಕಾಂಗ್ರೆಸ್ ಕಚೇರಿಗೆ ಬಿಜೆಪಿಯಿಂದ ಮುತ್ತಿಗೆಗೆ ಯತ್ನ

ಚಿಕ್ಕಮಗಳೂರು: ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ದಿನದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಲಾಯಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಕರಪತ್ರ ಅಂಟಿಸಲು ಮುಂದಾದ ಘಟನೆಯೂ ನಡೆಯಿತು.
20ಕ್ಕೂ ಹೆಚ್ಚು ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರಲ್ಲದೇ ಕಾಂಗ್ರೆಸ್ ಕಚೇರಿಗೆ ಕರಪತ್ರ ಅಂಡಿಸಲು ಯತ್ನಿಸಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ನೇತೃತ್ವದಲ್ಲಿ ಹೋರಾಟ ನಡೆಯಿತು. ಪ್ರತಿಭಟನಾಕಾರರನ್ನು ರಸ್ತೆಯಲ್ಲೇ ತಡೆದ ಪೊಲೀಸರ ವಿರುದ್ಧವೂ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರ ಸರ್ಪಗಾವಲಿನಲ್ಲೂ ಕರಪತ್ರ ಅಂಟಿಸಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಇಂದು ಬೆಳಗ್ಗೆ ಚಿಕ್ಕಮಗಳೂರು ನಗರದ ಅಲ್ಲಲ್ಲೇ ಕರಪತ್ರ ಅಂಟಿಸಿದ್ದ ಬಿಜೆಪಿ ಯುವ ಮೋರ್ಚಾ, ಖರ್ಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರಲ್ಲದೇ ಕಾಂಗ್ರೆಸ್ ನಾಯಕರು ಸ್ವಾರ್ಥಕ್ಕಾಗಿ ಸಂವಿಧಾನ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇಂದಿರಾಗಾಂಧಿ ಕಾಲದಲ್ಲಿ ತುರ್ತು ಪರಿಸ್ಥಿತಿ ಹೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97