11:18 PM Saturday 31 - January 2026

ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಕಾರಿಗೆ ಲಾರಿ ಡಿಕ್ಕಿ

06/02/2021

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. ಮಂಗಳೂರಿನ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಕತ್ತಲ್ಸಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬಿಕರ್ನಕಟ್ಟೆಯಿಂದ ನಂತೂರು ಮಾರ್ಗದಲ್ಲಿ ಸಾಗುತ್ತಿದ್ದಾಗ ಎದುರಿನಿಂದ ಮೀನಿನ ಲಾರಿಯೊಂದು ಬಂದಿದ್ದು, ದಯಾನಂದ ಕತ್ತಲ್ಸಾರ್ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version