ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ - Mahanayaka
12:08 PM Monday 23 - February 2026

ಹಗಲು ಹೊತ್ತಿನಲ್ಲೇ ಕಳ್ಳತನ ಮಾಡುತ್ತಿದ್ದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

bantwala
19/09/2023

ಬಂಟ್ವಾಳ: ಹಗಲು ವೇಳೆ ಮನೆ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಧಿತರನ್ನು ಫರಾಜ್ (27), ತೌಸಿಫ್ ಅಹಮ್ಮದ್‌ (34) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಗಳ ಕಳವು ಪ್ರಕರಣ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣದ ಆರೋಪಿಗಳನ್ನು

ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 12,23,000  ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು 3,000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000/- ಮೌಲ್ಯದ ಮಹೀಂದ್ರ ಕ್ಸೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು 15,56,000/ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ಚಿನ್ನಾಭರಣಗಳ ಪೈಕಿ ಪಣಂಬೂರು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳು ಸೇರಿರುತ್ತದೆ. ಆರೋಪಿಗಳ ಪೈಕಿ ಫರಾಜ್ ಎಂಬಾತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 279/2015 380 ಐಪಿಸಿ ಯಂತೆ ಹಾಗೂ ಪಣಂಬೂರು ಪೊಲೀಸ್ ಠಾಣೆ ಯಲ್ಲಿ ಅ. ಕ್ರ :21/2021 ಕ ಲಂ :454, 457, 380 ಐಪಿಸಿ ಯಂತೆ ಮನೆ ಕಳ್ಳತನ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ